ಹಳೇಬೀಡು: ಪರಿಸರ ಇಲ್ಲದೆ ಭೂಮಿಯ ಮೇಲೆ ಯಾವ ಜೀವಿಯು ಬದುಕಲು ಸಾಧ್ಯವಿಲ್ಲ ಎಂದು ಬೇಲೂರು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಶಿಕಲಾ ಹೇಳಿದರು.
ಹಳೆಬೀಡಿನ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡವನ್ನು ನೆಟ್ಟು ಅವರು ಮಾತನಾಡಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಲ್ಲರೂ ಗಿಡಗಳನ್ನು ಬೆಳೆಸಿ ಉತ್ತಮ ಪರಿಸರವನ್ನು ಕಾಪಾಡಬೇಕು ಎಂದು ಹೇಳಿದರು.
ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಯತೀಶ್ ಕುಮಾರ್ ಬಿ ಜಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್ ಹೆಚ್ ವಿ, ಗ್ರೇಡ್ -2 ತಹಶೀಲ್ದಾರ್ ಅಶೋಕ್.ಕೆ.ಬಿ, ವಲಯ ಅರಣ್ಯ ಅಧಿಕಾರಿ ಶೈಲಾ, ಉಪ ಪ್ರಾಂಶುಪಾಲ ಮುಳ್ಳಯ್ಯ, ಉಪ ವಲಯ ಅರಣ್ಯ ಅಧಿಕಾರಿಗಳಾದ ಪ್ರವೀಣ್ ಕುಮಾರ್, ಕೃಷ್ಣಪ್ಪ ಪೂಜಾರ್, ಪಿಡಿಒ ಎಸ್ .ಸಿ.ವಿರೂಪಾಕ್ಷ,
ಎ ಎಸ್ ಐ ಆನಂದ್ ಆರಾಧ್ಯ, ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ ಗೌಡ, ವಕೀಲರಾದ ಶ್ರೀಧರ್, ಶಂಕರಾನಂದ, ಮಲ್ಲಿಕಾರ್ಜುನ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.