ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಭ್ರಷ್ಟಾಚಾರ
ಅರಸೀಕೆರೆ: ಜಲಜೀವನ್ ಮಿಷಿನ್ ಯೋಜನೆ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಟಾಚಾರವಾಗಿದೆ, ಅಂದಾಜು 250 ಕೋಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ ನಡೆದಿದೆ, ಈ ಕಾಮಗಾರಿಯೂ 2021- 22 ನೇ ಸಾಲಿನಲ್ಲಿ ಪ್ರಾರಂಭವಾಗಿ 2025ನೇ ಸಾಲಿನವರೆಗೆ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ.
ಈ ಯೋಜನೆ ಅರಸೀಕೆರೆ ಕ್ಷೇತ್ರದ ಜನತೆಯ ಪಾಲಿಗೆ ಶಾಪವಾಗಿ ಪರಿಣಮಿಸಿದೆ ಎಂದು
ಕರ್ನಾಟಕ ರಾಜ್ಯ ರೈತ ಸಂಘ ರೈತಬಣದ ಜಿಲ್ಲಾಧ್ಯಕ್ಷ ದಯಾನಂದ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ತಾಲೂಕಿನ ಗ್ರಾಮೀಣ ಭಾಗದ ರೈತರಿಗೆ ವರದಾನವಾಗಬೇಕಾಗಿದ್ದ ಮನೆ ಮನೆಗೆ ಗಂಗೆ ಯೋಜನೆ ಶಾಪವಾಗಿ ಪರಿಣಮಿಸಿದೆ,
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷವೇ ಇದಕ್ಕೆ ಕಾರಣ ಎಂದರು.
ಈ ಯೋಜನೆ ಅನುಷ್ಠಾನದಲ್ಲಿ ವ್ಯಾಪಕ ಬ್ರಷ್ಟಾಚಾರವಾಗಿದೆ ಇದನ್ನು ಅಧಿಕಾರಿಗಳಿಗೆ ಪ್ರಶ್ನಿಸಿದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗುತ್ತಿಲ್ಲ. ಈ ಬಗ್ಗೆ ಶಾಸಕರ ಗಮನಕ್ಕೂ ತಂದರು ಯಾವುದೇ ಪ್ರಯೋಜನವಾಗಿಲ್ಲ, ಈ ಭ್ರಷ್ಟಾಚಾರದ ವಿರುದ್ಧ ಜುಲೈ 21 ರೈತ ಹುತಾತ್ಮ ದಿನಾಚರಣೆ ಯಂದು ಅರಸೀಕೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಲ್ಲದೆ ಈ ಸಂಬಂಧ ದೆಹಲಿ ಚಲೋ ಕಾರ್ಯಕ್ರಮವನ್ನು ಸಹ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಬೆಳಗುಂಬ, ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿರುವ ಕೇಂದ್ರ ಸರ್ಕಾರದ ಮಹತ್ವ ಯೋಜನೆ ಕಾಮಗಾರಿ ಕಳಪೆ ಕಾಮಗಾರಿ ಆಗಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಫೋಟೋಗಳನ್ನು ಪ್ರದರ್ಶಿಸಿದರು. ಈ ಯೋಜನೆ ಭ್ರಷ್ಟಾಚಾರದ ವಿರುದ್ಧ ಯಾವುದೇ ಪಕ್ಷದವರು ಕಳಪೆ ಕಾಮಗಾರಿ ಬಗ್ಗೆ ಧ್ವನಿ ಎತ್ತದೆ ಇರುವುದು ನಾಚಿಕೆಗೇಡಿನ ಸಂಗತಿ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಅಶೋಕ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ತಾರಾವತಿ, ಉಪಾಧ್ಯಕ್ಷೆ ಜ್ಯೋತಿ, ಚಿಕ್ಕಮಂಗಳೂರು ಜಿಲ್ಲ್ಲಾ ಘಟಕ ಅಧ್ಯಕ್ಷೆ ಜಯಶೀಲ , ಯುವ ಘಟಕದ ಅಧ್ಯಕ್ಷ ಜಯಣ್ಣ, ತಾಲೂಕು ಗೌರವಾಧ್ಯಕ್ಷ ಶಿವಣ್ಣ, ಸೇರಿದಂತೆ ಇತರರು ಉಪಸ್ಥಿತರಿದ್ದರು.