ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಎಂ ಶಿವಲಿಂಗೇಗೌಡರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ

ಅರಸೀಕೆರೆ: ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಅರಸೀಕೆರೆಯ ಸಮಸ್ತ ಸಾರ್ವಜನಿಕ ಬಂಧುಗಳ ಕುಂದು ಕೊರತೆಗಳ ಶೀಘ್ರ ಪರಿಹಾರಕ್ಕಾಗಿ ಜನ ಸಂಪರ್ಕ ಸಭೆಯನ್ನು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಎಂ ಶಿವಲಿಂಗೇಗೌಡ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ. ನಾಗರೀಕರು, ಸಾರ್ವಜನಿಕರು,ರೈತರು ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳ ಬಗ್ಗೆ ಹಾಗೂ ಹಲವಾರು ಇಲಾಖೆಗಳ ತಾಂತ್ರಿಕ ದೋಷದಿಂದ ಸೌಲಭ್ಯಗಳು ವಿಳಂಬವಾದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವುದುಕ್ಕಾಗಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ ಎಂ ಶಿವಲಿಂಗೇಗೌಡ ಇವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಿದ್ದು, ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗವನ್ನು ಉಪಯೋಗಿಸಿ ಕೊಳ್ಳಬಹುದಾಗಿದೆ.
ನಾಳೆ ನಡೆಯಲಿರುವ ಜನ ಸಂಪರ್ಕ ಸಭೆಯಲ್ಲಿ ಅರಸೀಕೆರೆ ನಗರದ ನಾಗರೀಕರ ಬಹಳ ದಿನಗಳ ಸಮಸ್ಯೆಯಾಗಿದ್ದ ಕಂದಾಯ ನಿವೇಶನಗಳಿಗೆ ನಗರಸಭೆ ವತಿಯಿಂದ ಬಿ ಖಾತೆಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದ ಸುಮಾರು 180 ಫಲಾನುಭವಿಗಳಿಗೆ ಅರಸೀಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ಗೃಹ ಮಂಡಳಿ ಅಧ್ಯಕ್ಷರಾದ ಕೆ ಎಂ ಶಿವಲಿಂಗೇಗೌಡರ ಸಮ್ಮುಖದಲ್ಲಿ ನಗರಸಭೆ ವತಿಯಿಂದ ವಿತರಿಸಲಾಗುವುದೆಂದು ಅರಸೀಕೆರೆ ನಗರಸಭೆಯ ಅಧ್ಯಕ್ಷರಾದ ಎಂ ಸಮೀವುಲ್ಲಾ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!