“ಶಕ್ತಿ ಯೋಜನೆ”ಮಹಿಳಾ ಫಲಾನುಭವಿಗಳ ಸಂಭ್ರಮ
ಅರಸೀಕೆರೆ:ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ಅಡಿ 500 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದಿರುವುದು ಐತಿಹಾಸಿಕ ಸಾಧನೆ ಎಂದು ಶಾಸಕ ಕೆ ಎಂ ಶಿವಲಿಂಗೇಗೌಡ ಘೋಷಿಸಿದರು.
ಶುಕ್ರವಾರ ತಾಲೂಕು ಕಚೇರಿ ಆವರಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ
500 ಕೋಟಿ ಮಹಿಳಾ ಫಲಾನುಭವಿಗಳಿಗೆ ಪ್ರಯಾಣ ಮಾಡಿದ ಫಲಾನುಭವಿಗಳಿಗೆ ಶಾಸಕ ಕೆ ಎಂ ಶಿವಲಿಂಗೇಗೌಡ ಅಭಿನಂದನೆ ಸಲ್ಲಿಸಿ, ಶಕ್ತಿ ಯೋಜನೆಯ ಸಂಭ್ರಮಾಚರಣೆ ಆಚರಿಸಿದರು.
5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಎಲ್ಲಾ ಹಂತದ ಮಹಿಳೆಯರಿಗೆ ಪ್ರಯೋಜನಕಾರಿಯಾಗಿದ್ದು, ಇದರಿಂದ ಮಹಿಳೆಯರಿಗೆ ಕೋಟ್ಯಾಂತರ ರೂಪಾಯಿಗಳು ಆರ್ಥಿಕವಾಗಿ ಉಳಿತಾಯವಾಗಿದೆ ಎಂದರು. ಇದರಿಂದ ಮಹಿಳೆಯರ ಆತ್ಮವಿಶ್ವಾಸ ತುಂಬ ಹೆಚ್ಚಾಗಿದ್ದು, ಮಹಿಳಾ ಸಬಲೀಕರಣವಾಗಿದೆ ಎಂದರು.
ಸಾರಿಗೆ ಸಂಸ್ಥೆಗೆ ನಷ್ಟವಾಗದಂತೆ ಯೋಜನೆ ನಿರ್ವಹಿಸುರುವುದು ರಾಜ್ಯ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದು ಶ್ಲಾಘಿಸಿದರು.
ಅರಸೀಕೆರೆ ತಾಲ್ಲೂಕು ನಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಶಾಸಕ ಕೆ ಎಂ ಶಿವಲಿಂಗೇಗೌಡ ತಿಳಿಸಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಮಾತನಾಡಿ ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನದಲ್ಲಿ ನಾವು ಮಾದರಿಯಾಗಿದ್ದೇವೆ ಎಂದರು.
ಈ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ನಗರ ಸಭೆ ಅಧ್ಯಕ್ಷರಾದ ಎಂ ಸಮೀವುಲ್ಲಾ, ಉಪಾಧ್ಯಕ್ಷ ಮನೋಹರ ಮೇಸ್ತ್ರಿ, ತಹಶೀಲ್ದಾರ್ ಎಂ ಜಿ ಸಂತೋಷ್ ಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಹೆಚ್ ಕೆ ಸತೀಶ್ ,ಡಿಪೋ ಮ್ಯಾನೇಜರ್ ಕೃಷ್ಣಪ್ಪ, ಇನ್ನಿತರ ಅಧಿಕಾರಿಗಳು, ನಗರಸಭಾ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.
“ಶಕ್ತಿ ಯೋಜನೆ”ಮಹಿಳಾ ಫಲಾನುಭವಿಗಳ ಸಂಭ್ರಮ
ಅರಸೀಕೆರೆ:ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ಅಡಿ 500 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದಿರುವುದು ಐತಿಹಾಸಿಕ ಸಾಧನೆ ಎಂದು ಶಾಸಕ ಕೆ ಎಂ ಶಿವಲಿಂಗೇಗೌಡ ಘೋಷಿಸಿದರು.
ಶುಕ್ರವಾರ ತಾಲೂಕು ಕಚೇರಿ ಆವರಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ
500 ಕೋಟಿ ಮಹಿಳಾ ಫಲಾನುಭವಿಗಳಿಗೆ ಪ್ರಯಾಣ ಮಾಡಿದ ಫಲಾನುಭವಿಗಳಿಗೆ ಶಾಸಕ ಕೆ ಎಂ ಶಿವಲಿಂಗೇಗೌಡ ಅಭಿನಂದನೆ ಸಲ್ಲಿಸಿ, ಶಕ್ತಿ ಯೋಜನೆಯ ಸಂಭ್ರಮಾಚರಣೆ ಆಚರಿಸಿದರು.
5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಎಲ್ಲಾ ಹಂತದ ಮಹಿಳೆಯರಿಗೆ ಪ್ರಯೋಜನಕಾರಿಯಾಗಿದ್ದು, ಇದರಿಂದ ಮಹಿಳೆಯರಿಗೆ ಕೋಟ್ಯಾಂತರ ರೂಪಾಯಿಗಳು ಆರ್ಥಿಕವಾಗಿ ಉಳಿತಾಯವಾಗಿದೆ ಎಂದರು. ಇದರಿಂದ ಮಹಿಳೆಯರ ಆತ್ಮವಿಶ್ವಾಸ ತುಂಬ ಹೆಚ್ಚಾಗಿದ್ದು, ಮಹಿಳಾ ಸಬಲೀಕರಣವಾಗಿದೆ ಎಂದರು.
ಸಾರಿಗೆ ಸಂಸ್ಥೆಗೆ ನಷ್ಟವಾಗದಂತೆ ಯೋಜನೆ ನಿರ್ವಹಿಸುರುವುದು ರಾಜ್ಯ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದು ಶ್ಲಾಘಿಸಿದರು.
ಅರಸೀಕೆರೆ ತಾಲ್ಲೂಕು ನಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಶಾಸಕ ಕೆ ಎಂ ಶಿವಲಿಂಗೇಗೌಡ ತಿಳಿಸಿದರು.. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಮಾತನಾಡಿ ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನದಲ್ಲಿ ನಾವು ಮಾದರಿಯಾಗಿದ್ದೇವೆ ಎಂದರು.