ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಕೆ ಎಂ ಶಿವಲಿಂಗೇಗೌಡ
ಅರಸೀಕೆರೆ:ಇದೇ ತಿಂಗಳು 26ನೇ ತಾರೀಕು ನಡೆಯಲಿರುವ ತಾಲೂಕಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಡಿಪ್ಲೋಮಾ ಕಾಲೇಜ್, ಇನ್ನಿತರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಗೃಹ ಮಂಡಳಿ ಅಧ್ಯಕ ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ ಎಂ ಶಿವಲಿಂಗೇಗೌಡ ಭೂಮಿ ಪೂಜೆ ನೆರವೇರಿಸಿ ಮಾತನಾಡಿ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವ ಸಂಪುಟದ ಅನೇಕ ಜನ ಮಂತ್ರಿಗಳೆಲ್ಲ ಸೇರಿ ಅರಸೀಕೆರೆ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಪ್ರಾರಂಭೋತ್ಸವ ಮತ್ತು ಶಂಕುಸ್ಥಾಪನೆ ಸಮಾರಂಭವನ್ನು ನೆರವೇರಿಸುತ್ತಿದ್ದಾರೆ, ಅದಕ್ಕೋಸ್ಕರ ಇವತ್ತು ವೇದಿಕೆಯನ್ನು ಅಳವಡಿಸುವುದಕೋಸ್ಕರ ನಮ್ಮ ಪಕ್ಷದ ಎಲ್ಲಾ ಮುಖಂಡರುಗಳು ಹಾಗೂ ಸಾರ್ವಜನಿಕರ ಜೊತೆಗೂಡಿ ಇವತ್ತು ಈ ಭೂಮಿ ಪೂಜಾ ಕಾರ್ಯ ಕ್ರಮವನ್ನು ಆಯೋಜನೆ ಮಾಡಿದ್ದು, ಎಲ್ಲಾ ಮುಖಂಡರು, ನಗರಸಭಾ ಅಧ್ಯಕ್ಷರು, ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಎಲ್ಲಾ ಸದಸ್ಯರು ಆಗಮಿಸಿದ್ದಾರೆ. ಎಲ್ಲರಿಗೂ ಸ್ವಾಗತವನ್ನು ಬಯಸುತ್ತಾ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹೇಳಿ ಶ್ರೀ ಜೆನುಕಲ್ ಸಿದ್ದೇಶ್ವರ ಸ್ವಾಮಿಯಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದರು.
ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳ ವಿವರವನ್ನು ಪತ್ರಿಕಾಗೋಷ್ಠಿಯಲ್ಲಿ ಪೂರ್ಣವಾಗಿ ತಿಳಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಎಂ ಸಮಿವುಲ್ಲಾ, ತಾಲೂಕು ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ಧರ್ಮ ಶೇಖರ್, ನಗರಸಭೆ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.