ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಎಲ್ಲರಿಗೂ ಅರಿವು ಮೂಡಿಸಿ- ನ್ಯಾ . ಪೂಜಾ ಎಸ್ ಕುಮಾರ್
ಅರಸೀಕೆರೆ: ಹೆಣ್ಣು ಮಕ್ಕಳಿಗೆ ಬಾಲ್ಯ ವಿವಾಹ ಮಾಡುವುದರಿಂದ ಮಾನಸಿಕ ಮತ್ತು ದೈಹಿಕವಾಗಿ ತೊಂದರೆಗಳಾಗುತ್ತವೆ.
18 ವರ್ಷದೊಳಗಿನ ಹೆಣ್ಣು ಮಕ್ಕಳು ಬಾಲ್ಯ ವಿವಾಹವಾದರೆ ಅವರಿಗೆ ದೈಹಿಕ ವಾಗಿ ಮತ್ತು ಮಾನಸಿಕವಾಗಿ ಬೆಳವಣಿಗೆ ಆಗಿರುವುದಿಲ್ಲ, ಸಂಸಾರಿಕ ಅರಿವು ಹಾಗೂ ವ್ಯವಹಾರಿಕ ವಿಚಾರಗಳ ಅರಿವು ಅವರಿಗೆ ಇರುವುದಿಲ್ಲ, ಪ್ರಶ್ನೆ ಮಾಡುವ ಧೈರ್ಯ ಇಲ್ಲದೆ ಆದ್ದರಿಂದ ಅವರು ಶೋಷಣೆಗೆ ಒಳಗಾಗುವ ಸಾಧ್ಯತೆ ಹೆಚ್ಚು ಇರುತ್ತದೆ ಎಂದು ಅಪರ ಸಿವಿಲ್ ಜಡ್ಜ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಪೂಜಾ ಎಸ್ ಕುಮಾರ್ ತಿಳಿಸಿದರು.
ಅವರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಬಾಲ್ಯ ವಿವಾಹ ನಿಷೇಧ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿ ಮಾತನಾಡಿ ಎಲ್ಲಾ ಹೆಣ್ಣು ಮಕ್ಕಳು ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ತಿಳಿದುಕೊಂಡು ನಿಮ್ಮ ಸ್ನೇಹಿತರಿಗೆ,ಪೋಷಕರಿಗೆ ಹಾಗೂ ಸುತ್ತಮುತ್ತಲಿನ ಜನರಿಗೆ ತಿಳಿಸಿ ಇದು ಶಿಕ್ಷಾರ್ಹಅಪರಾಧ ಎಂದು ಅರಿವು ಮೂಡಿಸಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿವೆ, ಈ ಕಾಯ್ದೆಯಿಂದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಕಾರ ಹೆಣ್ಣುಮಕ್ಕಳ ರಕ್ಷಣೆ, ಪರಿಹಾರ ಹಾಗೂ ಅಪರಾಧಿಗಳಿಗೆ ಕಠಿಣ ಶಿಕ್ಷೆಗಳು ಇವೆ ಎಂದು ತಿಳಿಸಿದರು.
ಬಾಲ್ಯ ವಿವಾಹ ನಿಷೇಧ ಕಾಯ್ದೆಯಿಂದ ಹುಡುಗ ಹಾಗೂ ಪೋಷಕರು ಹಾಗೂ ಬಾಲ್ಯ ವಿವಾಹ ಮಾಡಿಸಿದ ಪುರೋಹಿತರು ಮತ್ತು ಇದರಲ್ಲಿ ಯಾರೆಲ್ಲ ಭಾಗಿಯಾಗಿರುತ್ತಾರೆ ಎಲ್ಲರಿಗೂ ಶಿಕ್ಷೆ ಆಗಲಿದೆ ಎಂದು ತಿಳಿಸಿದರು.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಜಗದೀಶ್ ಕೆ ಹಿರೇಮಠ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಕೆ ಜಿ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸಹಾಯಕ ಸರ್ಕಾರಿ ಅಭಿಯೋಜಕರು ಮತ್ತು ಕಾರ್ಯನಿರತ ಸದಸ್ಯ ಕಾರ್ಯದರ್ಶಿ ಶಶಾಂಕ್ ಎಸ್ ಇವರು ಬಾಲ್ಯ ವಿವಾಹ ನಿಷೇಧ ಕಾನೂನು ಅರಿವು ನೆರವು ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ರಂಗನಾಥ್, ಆರಕ್ಷಕ ಉಪ ನಿರೀಕ್ಷಕರು ನಗರ ಪೊಲೀಸ್ ಠಾಣೆ ದಿಲೀಪ್ ಕುಮಾರ್ ಬಿ ಎಂ, ವಕೀಲರಾದ ಲೋಕೇಶ್, ವಿರೂಪಾಕ್ಷ ಟಿ ಟಿ, ಸಿದ್ದಮಲ್ಲಪ್ಪ, ಸಿಡಿಪಿಓ ಯೋಗೇಶ್, ಹಿರಿಯ ಪತ್ರಕರ್ತ ಎಚ್ ಡಿ ಸೀತಾರಾಮ್, ಶಾಲಾ ಶಿಕ್ಷಕರುಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.