ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ
ಅರಸೀಕೆರೆ: ನಗರದ ಹೊರವರಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ವತಿಯಿಂದ ದಿನಾಂಕ:25-07-2025 ರಂದು ಪ್ರಥಮವರ್ಷದ ಬಿಎ.ಬಿಕಾಂ. ಬಿಸಿಎ. ವಿದ್ಯಾರ್ಥಿಗಳಿಗೆ ಕಾಲೇಜಿನ ಮತ್ತು ಸರಕಾರದ ಸೌಲಭ್ಯಗಳನ್ನು ತಿಳಿಸಿ ವಿದ್ಯಾರ್ಥಿಗಳು ತಮ್ಮ ಗುರಿಗಳನ್ನು ಸಾಕಾರಗೊಳಿಸಿಕೊಳ್ಳುವ ಬಗ್ಗೆ ಮಾಹಿತಿ ಒದಗಿಸುವ ವಿಶೇಷ ಕಾರ್ಯಕ್ರಮ ಅಭಿವಿನ್ಯಾಸ ನೆರೆವೇರಿತು.
ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಧ್ಯಾಪಕರು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿದರು. ಪ್ರಾಂಶುಪಾಲರಾದ ಪ್ರೊ. ಗೀತಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಬೇಕಾದ ಅತ್ಯುತ್ತಮ ಕಟ್ಟಡ, ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಕ್ರೀಡಾ ಪರಿಕರಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿದೆ, ಎಲ್ಲಾ ವಿಷಯಗಳನ್ನು ಬೋಧಿಸಲು ನುರಿತ ಪ್ರಾಧ್ಯಾಪಕರು ಇದ್ದು ಸರಕಾರ ನೀಡಿರುವ ಈ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಎಲ್ಲಾ ಪ್ರಾಧ್ಯಾಪಕರು ತಮ್ಮ ಬೋಧನಾ ವಿಷಯದ ಮಹತ್ವವನ್ನು ಪರಿಚಯಿಸುವುದರೊಂದಿಗೆ ಉದ್ಯೋಗ ಅವಕಾಶಗಳ ಬಗ್ಗೆ ತಿಳಿಸಿಕೊಟ್ಟರು. ಪ್ರಥಮ ವರ್ಷದ ಪದವಿಗೆ ಪ್ರವೇಶಾತಿಪಡೆದಿರುವ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಹಾಜರಿದ್ದರು.ಒಟ್ಟಾರೆಯಾಗಿ ಅಭಿವಿನ್ಯಾಸ ಕಾರ್ಯಕ್ರಮ ಬಗ್ಗೆ ಪೋಷಕರು ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮ ವಿದ್ಯಾರ್ಥಿಗಳು ಹಾಗೂ ಪೋಷಕರ ಭಾಗವಹಿಸುವಿಕೆಯಿಂದ ತುಂಬಾ ಅರ್ಥಪೂರ್ಣವಾಗಿ ಯಶಸ್ವಿಯಾಯಿತು.