ಶ್ರೀ ಆಂಜನೇಯ ಸ್ವಾಮಿಗೆ ಬೆಣ್ಣೆ ಅಲಂಕಾರ
ಚಿಕ್ಕಜಾಜೂರು: ಶ್ರಾವಣ ಮಾಸದ ಮೊದಲ ಶನಿವಾರ ಗ್ರಾಮದ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ನಡೆಸಲಾಯಿತು. ಗ್ರಾಮದೇವರು ಶ್ರೀ ಆಂಜನೇಯ ಸ್ವಾಮಿಗೆ ಬೆಣ್ಣೆಯಿಂದ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ರಾಮ, ಸೀತಾ ಮಾತೆ,ಲಕ್ಷ್ಮಣ ಹಾಗೂ ಆಂಜನೇಯ ಸ್ವಾಮಿಗೆ ವಿಶೇಷವಾಗಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ದೇವಸ್ಥಾನಗಳಲ್ಲಿ ನಡೆದ ವಿಶೇಷ ಪೂಜೆಗೆ ಗ್ರಾಮದ ಹಾಗೂ ವಿವಿಧ ಸುತ್ತಾ ಮುತ್ತಾ ಗ್ರಾಮಗಳ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಹೋಗಿ ಭಕ್ತಿ ಸಮರ್ಪಿಸಿದರು.