ಸ್ವಾತಂತ್ರ್ಯೋತ್ಸವ ಆಚರಣೆಗೆ ಪೂರ್ವ ಸಿದ್ಧತಾ ಸಭೆ
ಅರಸೀಕೆರೆ:ಆಗಸ್ಟ್ 15ರಂದು ನಗರದ ಶ್ರೀ ಜೇನುಕಲ್ ಕ್ರೀಡಾಂಗಣದಲ್ಲಿ ಆಚರಿಸಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಬೇಕೆಂದು ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ ಎಂ ಶಿವಲಿಂಗೇಗೌಡ ಹೇಳಿದರು.
ತಾಲೂಕು ಆಡಳಿತ ಕಚೇರಿ ಪಕ್ಕದಲ್ಲಿರುವ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ವಿದ್ಯುತ್ ದೀಪ ಅಲಂಕಾರ, ಧ್ವಜಾರೋಹಣ ಮಾಡಬೇಕು.
ಸರ್ಕಾರಿ ಮತ್ತು ಖಾಸಗಿ ಎರಡು ವಿಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಆಯೋಜನೆ ಮಾಡಬೇಕು ಎಂದರು.
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ
ಮಕ್ಕಳ ನೃತ್ಯ ರೂಪಕ ಆಕರ್ಷಕವಾಗಿರಬೇಕು. ಮಕ್ಕಳಿಗೆ ಶುಚಿ , ರುಚಿಯಾದ ಉಪಹಾರ ಹಂಚಿಕೆ, ಕುಡಿಯುವ ನೀರು, ಎಲ್ಲಾ ಮಕ್ಕಳಿಗೂ ಕುಳಿತುಕೊಳ್ಳಲು ನೆರಳಿನ ವ್ಯವಸ್ಥೆ ಹಾಗೂ ಕುರ್ಚಿಯ ವ್ಯವಸ್ಥೆಯನ್ನು ಮಾಡಬೇಕು. ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಹಾಜರಾಗಬೇಕು ಎಂದು ಮನವಿ ಮಾಡಿದರು.
ತಹಶೀಲ್ದಾರ್ ಎಂ ಜಿ ಸಂತೋಷ್ ಕುಮಾರ್ ಮಾತನಾಡಿ ಕ್ರೀಡೆ, ಸಾಹಿತ್ಯ, ಕೃಷಿ ,ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಆಗಸ್ಟ್ 11 ರೊಳಗೆ ಅರ್ಜಿಯನ್ನು ಸ್ವವಿವರ ಮತ್ತು ಸಾಧನೆಯ ಮಾಹಿತಿಯೊಂದಿಗೆ ಕಚೇರಿಯ ಅವಧಿಯಲ್ಲಿ ತಾಲೂಕು ಕಚೇರಿಗೆ ಸಲ್ಲಿಸಬೇಕೆಂದು ತಿಳಿಸಿದರು.
ಉಪ ಪೊಲೀಸ್ ಅಧೀಕ್ಷಕ ಗೋಪಿ, ಇನ್ಸ್ಪೆಕ್ಟರ್ ಅರುಣ್ ಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್ ಕೆ ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಪೌರಾಯುಕ್ತ ಕೃಷ್ಣಮೂರ್ತಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ್, ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.