“ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ”
ಹಾಸನ: ಹಾಸನದ ಕಾರೇಕೆರೆ ಕೃಷಿ ಮಹಾವಿದ್ಯಾಲಯದ ಕೃಷಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಸನ ತಾಲೂಕಿನ ದುದ್ದ ಹೋಬಳಿಯ ಹಾರನಹಳ್ಳಿ ಗ್ರಾಮದಲ್ಲಿ ರೈತರಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2025-26 ಮೂಲಕ ಅಜೋಲ ಕೃಷಿ ಬಗ್ಗೆ ಮಾಹಿತಿ ನೀಡಿ. ಅದರ ಉಪಯೋಗದ ಬಗ್ಗೆ ಮತ್ತು ರೈತರಿಗೆ ಇದರಿಂದ ಹೇಗೆ ಲಾಭವಾಗುತ್ತದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ರೈತರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.